Job Description: * ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ. ಪಾಟೀಲ್‌ ಅವರನ್ನು ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರ್ಕಾರವು ಶುಕ್ರವಾರ ಅಧಿಸೂಚನೆ ಹೊರಡಿಸಿದೆ.* ಶಿವರಾಜ್‌ ಪಾಟೀಲ್‌ ಅವರು 1940 ರ ಜನವರಿ 12 ರಂದು ಜನಿಸಿದರು. 1962 ರ ಜುಲೈ 25 ರಂದು ವಕೀಲರಾಗಿ ನೋಂದಾಯಿಸಿಕೊಂಡು ವೃತ್ತಿ ಜೀವನ ಆರಂಭಿಸಿದರು. ಕಲಬುರ್ಗಿಯಲ್ಲಿ ಪ್ರಾಕ್ಟೀಸ್‌ ಆರಂಭಿಸಿದ ಅವರು 1979 ರಂದು ಬೆಂಗಳೂರಿಗೆ ಸ್ಥಳಾಂತರಗೊಂಡು, ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಸದಸ್ಯರಾದರು. * 1990 ರ ಮಾರ್ಚ್‌ 29 ರಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕವಾದ ಶಿವರಾಜ್‌ ಪಾಟೀಲ್‌ ಅವರು, 29-04-1994 ರಂದು ಮದ್ರಾಸ್‌ ಹೈಕೋರ್ಟ್‌ಗೆ ವರ್ಗಾವಣೆಗೊಂಡಿದ್ದರು.* 29-12-1998 ರಿಂದ 19-01-1999 ರ ವರೆಗೆ ಮದ್ರಾಸ್‌ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಪಾಟೀಲ್‌ ಅವರು 22-01-1999 ರಂದು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.* 15-03-2000 ರಂದು ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಪಡೆದಿದ್ದ ನ್ಯಾ. ಪಾಟೀಲ್‌ ಅವರು ಹಾಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದಾರೆ. ನ್ಯಾ. ಪಾಟೀಲ್‌ ಅವರಿಗೆ ಕಾನೂನು ವಿಭಾಗದಲ್ಲಿ ಗೌರವ ಡಾಕ್ಟರೇಟ್‌ ಸಹ ಪ್ರಧಾನವಾಗಿದೆ.* ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ ಎಲ್‌ ಮಂಜುನಾಥ್‌ ಅವರು ಈಚೆಗೆ ತೀರಿಕೊಂಡ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷರ ಸ್ಥಾನ ಖಾಲಿಯಾಗಿತ್ತು.