Job Description: * ಭಾರತ ಡಿಸೇಂಬರ್ 1 ರಿಂದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸುತ್ತಿದ್ದು, ಭಯೋತ್ಪಾದನೆ ನಿಗ್ರಹ ಮತ್ತು ಬಹುಪಕ್ಷೀಯ ಸಂಬಂಧಗಳ ಸುಧಾರಣೆಯು ದೇಶದ ಆದ್ಯತೆಯಾಗಿರಲಿದೆ ಎಂದು ಭಾರತದ ವಿಶ್ವಸಂಸ್ಥೆಯ ಕಾಯಂ ಪ್ರತಿನಿಧಿ ರುಚಿರಾ ಕಾಂಬೋಜ್‌ ತಿಳಿಸಿದ್ದಾರೆ.* ಭಾರತದ ಒಂದು ತಿಂಗಳ ಅಧಿಕಾರಾವಧಿ ಡಿ.31ಕ್ಕೆ ಮುಕ್ತಾಯವಾಗಲಿದೆ. ಇದಕ್ಕೂ ಮೊದಲು ಕಳೆದ ವರ್ಷ ಆಗಸ್ಟ್‌ನಲ್ಲಿ ಭಾರತ ಮಂಡಳಿಯ ಅಧ್ಯಕ್ಷತೆ ವಹಿಸಿಕೊಂಡಿತ್ತು.* ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿ ಭಾರತದ ಎರಡು ವರ್ಷದ ಅಧಿಕಾರಾವಧಿಯು ಮುಕ್ತಾಯದ ಹಂತದಲ್ಲಿದೆ. 15 ರಾಷ್ಟ್ರಗಳು ಮಂಡಳಿಯ ಸದಸ್ಯತ್ವ ಹೊಂದಿವೆ. * ಇಂಗ್ಲಿಷ್‌ ವರ್ಣಮಾಲೆಯ ಪ್ರಕಾರ ಆಯಾ ದೇಶಗಳಿಗೆ ಮಂಡಳಿಯ ಅಧ್ಯಕ್ಷ ಸ್ಥಾನದಲ್ಲಿ ಒಂದು ತಿಂಗಳ ಅವಧಿಗೆ ಕಾರ್ಯನಿರ್ವಹಿಸುವ ಅವಕಾಶ ನೀಡಲಾಗುತ್ತದೆ.* ಅಧಿಕಾರಾವಧಿ ಸ್ಮರಣಾರ್ಥ ಮಹಾತ್ಮ ಗಾಂಧಿ ಅವರ ಪುತ್ಥಳಿಯನ್ನು ಭಾರತ ವಿಶ್ವಸಂಸ್ಥೆಗೆ ಉಡುಗೊರೆಯಾಗಿ ನೀಡಲಿದೆ. ಡಿ.14ರಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರ ಭೇಟಿಯ ಸಂದರ್ಭದಲ್ಲಿ ಪುತ್ಥಳಿ ಅನಾವರಣಗೊಳ್ಳಲಿದೆ.* ಇದು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸ್ಥಾಪಿಸಲಾಗುತ್ತಿರುವ ಮಹಾತ್ಮ ಅವರ ಮೊದಲ ಶಿಲ್ಪ.