Job Description: * ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ (ಐಒಎ) ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿಟಿ ಉಷಾ ಶನಿವಾರ ಆಯ್ಕೆಯಾಗಿದ್ದಾರೆ. 58 ವರ್ಷ ವಯಸ್ಸಿನ ಪಿಟಿ ಉಷಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಸಾಕಷ್ಟು ಪದಕಗಳನ್ನು ಗೆದ್ದುಕೊಡುವ ಮೂಲಕ ಸಾಧನೆ ಮಾಡಿದ್ದಾರೆ. * ಏಷ್ಯನ್ ಗೇಮ್ಸ್‌ನಲ್ಲಿ ಹಲವು ಚಿನ್ನದ ಪದಕ ಗೆದ್ದುಕೊಂಡಿರುವ ಅವರು 1984 ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದರು. ಈಗ ಅವರು ಇಂಡಿಯನ್ ಒಲಿಂಪಿಕ್ಸ್ ಅಸೊಸಿಯೇಶನ್‌ಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.