Job Description: * ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಸೋಂಕು ವರದಿ ಯಾಗಿರುವುದನ್ನು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ದೃಢಪಡಿಸಿದ್ದಾರೆ. ರಾಯಚೂರು ಜಿಲ್ಲೆಯ ಐದು ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ. ಪುಣೆ ವೈರಾಲಜಿ ಲ್ಯಾಬ್‌ನಿಂದ ಪಾಸಿಟಿವ್ ರಿಪೋರ್ಟ್‌ ಬಂದಿದೆ. ಝೀಕಾ ವೈರಸ್‌ ಸೋಂಕಿನ ಬಾಲಕಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ಇನ್ನು ಝೀಕಾ ಸೋಂಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಈವರೆಗೂ ಲಭ್ಯವಾಗಿಲ್ಲ ಎಂದರು.* ಕೆಲವು ತಿಂಗಳ ಹಿಂದೆ ಕೇರಳ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ಝಿಕಾ ವೈರಸ್ ಪ್ರಕರಣಗಳು ಕಂಡುಬಂದಿವೆ. ಇನ್ನು ಕರ್ನಾಟಕದಲ್ಲಿ ಇಂದು ಮೊದಲ ಪ್ರಕರಣವಾಗಿದೆ. ಸ್ಯಾಂಪಲ್ ಅನ್ನು ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ಪರೀಕ್ಷೆಗೆ ಒಳಪಡಿಸಿದಾಗ ಇದು ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಅಂತಹ ಮಾದರಿಗಳಲ್ಲಿ 10 ಪ್ರತಿಶತವನ್ನು ಪರೀಕ್ಷೆಗೆ ಪುಣೆಗೆ ಕಳುಹಿಸಲಾಗುತ್ತದೆ. ಡಿಸೆಂಬರ್ 9ರಂದು ಪಾಸಿಟಿವ್ ಬಂದಿದೆ ಎಂದು ಸಚಿವರು ಹೇಳಿದರು.