Job Description: * ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳ ಸಂಘ ಕೊಡ ಮಾಡುವ 2021 ಮತ್ತು 2022 ನೇ ಸಾಲಿನ 'ಸಿದ್ಧಗಂಗಾಶ್ರೀ' ಪ್ರಶಸ್ತಿಗೆ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌ ಮಂಜುನಾಥ್‌ ಮತ್ತು ಶ್ರೀ ಪ್ರಭು ಚನ್ನಬಸವಸ್ವಾಮಿಗಳು ಆಯ್ಕೆ ಆಗಿದ್ದಾರೆ. * ಈ ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಅಭಿನಂದನಾ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. * ಶಿವಕುಮಾರ ಸ್ವಾಮೀಜಿ ಹೆಸರಿನಲ್ಲಿ ನೀಡುವ "ಸಿದ್ದಗಂಗಾ ಕುಮಾರಶ್ರೀ" ಪ್ರಶಸ್ತಿಗೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ.* ಸಾಹಿತ್ಯ, ಸಾಮಾಜಿಕ, ಶೈಕ್ಷಣಿಕ, ಕೃಷಿ ಕ್ಷೇತ್ರದಲ್ಲಿ ಸೇವೆಸಲ್ಲಸಿದವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. - ಶಿಕ್ಷಣ ಕ್ಷೇತ್ರದಲ್ಲಿ ಡಾ. ಭೀಮಾಶಂಕರ ಚಂದ್ರಶೇಖರ ಬಿಲಗುಂದಿ - ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ. ಎಸ್ ಮಲೆಯೂರು ಗುರುಸ್ವಾಮಿ - ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಡಾ. ವೈ ಸಿ ಕಮಲ - ಕೃಷಿ ಕ್ಷೇತ್ರದಲ್ಲಿ ಕವಿತಾ ಮಿಶ್ರಾ ರವರು ಆಯ್ಕೆಯಾಗಿದ್ದಾರೆ. * ಈ ಪ್ರಶಸ್ತಿಯು ತಲಾ 15 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. * "ಕಾಯಕಯೋಗಿ" ಪ್ರಶಸ್ತಿಗೆ ಪತ್ರಕರ್ತ ರಂಜಾನ್ ದರ್ಗಾ ಅವರನ್ನು ಆಯ್ಕೆ ಮಾಡಲಾಗಿದೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸಂಘಸಿರಿ ಪ್ರಶಸ್ತಿ ನೀಡಲಾಗುತ್ತಿದೆ.