Job Description: * ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ದಿನಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ನೀಡಿದೆ.* ನರೇಗಾದಲ್ಲಿ ಮಹಿಳೆಯರ ಭಾಗವಹಿಸುವಿಕೆ ಶೇ.51ರಷ್ಟಿದ್ದು, ಇದನ್ನು ಶೇ. 60 ಕ್ಕೆ ಹೆಚ್ಚಿಸುವ ಗುರಿ ಇದೆ. ಶೇ. 60 ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗಿದೆ.