Job Description: * ಮಹತ್ವಾಕಾಂಕ್ಷೆಯ ಮಾನವ ಸಹಿತ ಬಾಹ್ಯಾಕಾಶ ಯಾತ್ರೆ ಯೋಜನೆ ‘ಗಗನಯಾನ್ 2024ರ ನಾಲ್ಕನೇ ತ್ರೈಮಾಸಿಕದಲ್ಲಿ ಸಾಕಾರಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. * ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. * ಸಿಬ್ಬಂದಿ ಸುರಕ್ಷತೆಗಾಗಿ ಅಂತಿಮ ಹಂತದ ಯೋಜನೆ ಸಾಕಾರಕ್ಕೂ ಮುನ್ನ ಸಿಬ್ಬಂದಿರಹಿತ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಗುವುದು. ಇದರ ಫಲಿತಾಂಶವನ್ನು ನೋಡಿಕೊಂಡು ಮಾನವಸಹಿತ ಯಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.