Job Description: * ನ್ಯಾಷನಲ್ ಮಾನಿಟೈಸೇಷನ್ ಪೈಪ್‌ಲೈನ್ ಯೋಜನೆಯಡಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 25 ವಿಮಾನ ನಿಲ್ದಾಣಗಳನ್ನು ಗುತ್ತಿಗೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 2022 ರಿಂದ 2025ರ ಅವಧಿಯಲ್ಲಿ ಈ ವಿಮಾನ ನಿಲ್ದಾಣಗಳನ್ನು ಖಾಸಗಿಗೆ ಗುತ್ತಿಗೆ ನೀಡಲು ಉದ್ದೇಶಿರುವ ಬಗ್ಗೆ ರಾಜ್ಯಸಭೆಗೆ ನಾಗರಿಕ ವಿಮಾನಯಾನ ರಾಜ್ಯ ಸಚಿವ ವಿ.ಕೆ. ಸಿಂಗ್ ಮಾಹಿತಿ ನೀಡಿದ್ದಾರೆ.* ಗುತ್ತಿಗೆ ಪಡೆದ ವಿಮಾನನಿಲ್ದಾಣದ ನಿರ್ವಹಣೆ ಮತ್ತು ಅಭಿವೃದ್ಧಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಇದರಿಂದಾಗಿ ವಿಮಾನ ನಿಲ್ದಾಣಗಳ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಅಲ್ಲಿ ಲಭ್ಯವಿರುವ ಸೌಲಭ್ಯಗಳಿಂದ ದೇಶಕ್ಕೆ ಮತ್ತು ಪ್ರಯಾಣಿಕರಿಗೆ ನೆರವಾಗಲಿದೆ.