Job Description: * ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ಡಿಸೇಂಬರ್ 30 ರಂದು ನಿಧನರಾದರು.* ಹೀರಾಬೆನ್ ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದರೆ.* ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದರು.* ಹೀರಾಬೆನ್‌ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ನಿಧನಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್, ಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.