Job Description: * ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ 82 ವರ್ಷದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ಅನಾರೋಗ್ಯ ಕಾರಣದಿಂದ ಜನೆವರಿ 02 ರಂದು ನಿಧನರಾದರು. * ಶ್ರೀ ಸಿದ್ದೇಶ್ವರ ಸ್ವಾಮಿಜಿಯವರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದ್ದರು. ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಪಡೆದುಕೊಂಡಿದ್ದರು. * ಸಿದ್ದೇಶ್ವರ ಸ್ವಾಮೀಜಿಯರು ನಿಸ್ವಾರ್ಥ ಸೇವೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಆಶ್ರಯತಾಣವಾಗಿದ್ದರು. ಕರ್ನಾಟಕವಲ್ಲದೆ ಮಹಾರಾಷ್ಟ್ರದ ಪ್ರಮುಖ ನಗರಗಳಲ್ಲಿ ತಿಂಗಳುಗಟ್ಟಲೆ ಪ್ರವಚನ ನೀಡುತ್ತಿದ್ದರು. ಕ್ರಮೇಣ ಶ್ರೀಗಳು ಗ್ರಾಮೀಣ ಪ್ರದೇಶದ ಮಕ್ಕಳು ವಿದ್ಯೆಗಾಗಿ ಕಷ್ಟಪಡುತ್ತಿದ್ದುದನ್ನು ಗಮನಿಸಿ ಅವರಿಗಾಗಿ ವಿದ್ಯಾಸಂಸ್ಥೆಗಳನ್ನು ಪ್ರಾರಂಭಿಸಿ ಅವರಿಗೆ ಊಟ, ವಸತಿಗಳಿಗೆ ವ್ಯವಸ್ಥೆ ಮಾಡಿದರು. ಇದರಿಂದಾಗಿ ಸಾವಿರಾರು ಮಕ್ಕಳು ವಿದ್ಯಾವಂತರಾದರು. ಹಾಗೆ ವಿದ್ಯೆ ಕಲಿಯಲು ಬಂದ ಸಾವಿರಾರು ಮಕ್ಕಳಲ್ಲಿ ಶ್ರೀ ಸಿದ್ದೇಶ್ವರರೂ ಒಬ್ಬರಾಗಿದ್ದರು.