Job Description: * ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ 11-01-2023 ರಂದು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ 1,02,980 ನೇಕಾರರು ಹಾಗೂ ಕಾರ್ಮಿಕರಿಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ವಾರ್ಷಿಕ ಆರ್ಥಿಕ ನೆರವು 5000/- ಗಳಂತೆ ಒಟ್ಟು 5,149.00 ಲಕ್ಷ ರೂಗಳನ್ನು ನೇಕಾರರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಗೆ ಇಂದು ಚಾಲನೆ ನೀಡಿದ್ದಾರೆ.* ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕರಿಗೆ "ನೇಕಾರ ಸಮ್ಮಾನ್" ಯೋಜನೆಯ ಆಸರೆ.* ನೋಂದಾಯಿತ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕರಿಗೆ "ನೇಕಾರ ಸಮ್ಮಾನ್" ಯೋಜನೆಯಡಿ ರೂ 5000 /- ಗಳ ಆರ್ಥಿಕ ನೆರವನ್ನು ಜನೆವರಿ 11 ಇಂದು ನಡೆಯುವ ಕಾರ್ಯಕ್ರಮದಲ್ಲಿ 1,02,980 ಫಲಾನುಭವಿಗಳಿಗೆ ಬಸವರಾಜ ಬೊಮ್ಮಾಯಿಯವರು ಸಹಾಯಧನ ಬಿಡುಗಡೆ ಮಾಡಲಿದ್ದಾರೆ.