Job Description: * ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಕಳೆದ ವರ್ಷ 2022ರಲ್ಲಿ ತೆರೆಕಂಡ ಆರ್ ಆರ್ ಆರ್ ಚಿತ್ರದ 'ನಾಟು ನಾಟು' ಹಾಡು 2023ರ ಗೋಲ್ಡನ್ ಗ್ಲೋಬ್ ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆದ್ದಿದೆ.* ತೆಲುಗು ಟ್ರ್ಯಾಕ್ "ನಾಟು ನಾಟು" ನ್ನು ಹಿರಿಯ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಯೋಜಿಸಿದ್ದರು. ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಸಾಹಿತ್ಯ ಬರೆದಿದ್ದರೆ. * RRR-ಆರ್ ಆರ್ ಆರ್ ಚಿತ್ರ ತಂಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಭಿನಂದಿಸಿದರು. ಈ ಪ್ರತಿಷ್ಠಿತ ಗೌರವ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತಂದಿದೆ.'' ಎಂದು ಹೇಳಿದ್ದಾರೆ. * ವಿಶ್ವದಾದ್ಯಂತ ಹೊಸ ದಾಖಲೆಗಳನ್ನ ಸೃಷ್ಟಿಸಿರುವ ಈ ಚಿತ್ರ ಇದೀಗ ಅಂತರಾಷ್ಟ್ರೀಯ ಮಟ್ಟದ 2023ರ ಗೋಲ್ಡನ್ ಗ್ಲೋಬ್ ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆದ್ದು ಬೀಗಿದೆ.* ಸ್ಲಮ್ ಡಾಗ್ ಮಿಲಿಯನೇರ್ ಚಿತ್ರಕ್ಕಾಗಿ ಎಆರ್ ರೆಹಮಾನ್ ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನ ಪಡೆದ ಮೊದಲ ಭಾರತೀಯರಾಗಿ ಇತಿಹಾಸ ಸೃಷ್ಟಿಸಿದ್ದರು. ಇದೀಗ RRR ಚಿತ್ರಕ್ಕಾಗಿ ನಾಮ ನಿರ್ದೇಶನಗೊಂಡು ಭಾರತದಿಂದ ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನು ಪಡೆದ ಎರಡನೇ ವ್ಯಕ್ತಿಯಾಗಿ ಕೀರವಾಣಿ ಇತಿಹಾಸವನ್ನು ಸೃಷ್ಟಿಸಿದ್ದಾರೆ.