Job Description: ದಿಲ್ಲಿಯ ಜನಪ್ರಿಯ ಪ್ರಗತಿ ಮೈದಾನ್ ಮೆಟ್ರೋ ನಿಲ್ದಾಣದ ಹೆಸರನ್ನು “ಸುಪ್ರೀಂಕೋರ್ಟ್ ಮೆಟ್ರೋ ನಿಲ್ದಾಣ” ಎಂದು ಮರುನಾಮಕರಣ ಮಾಡಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದಿಲ್ಲಿ ಸರ್ಕಾರ ಮಂಗಳವಾರ ಘೋಷಿಸಿದೆ. ಅಲ್ಲದೇ ದ ಮುಕಾರ್ಬಾ ಚೌಕ್ ಮತ್ತು ಪ್ಲೈಓವರ್ ಹೆಸರನ್ನು ಕ್ಯಾಪ್ಟನ್ ವಿಕ್ರಮ್ ಬಾತ್ರಾ ಚೌಕ್ ಎಂದು ಮರುನಾಮಕರಣ ಮಾಡಲಾಗುವುದು ಎಂದು ಹೇಳಿದರು. ಬಾತ್ರಾ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿದ್ದು, ಆ ಗೌರವಾರ್ಥ ಹೆಸರನ್ನು ಇಡಲು ನಿರ್ಧರಿಸಲಾಗಿದೆ ಎಂದರು.