Job Description: ತಿರುವನಂತಪುರ (ಪಿಟಿಐ): ಪೌರತ್ವ (ತಿದ್ದುಪಡಿ) ಕಾಯ್ದೆ ರದ್ದುಪಡಿಸಬೇಕೆಂದು ಆಗ್ರಹಿಸಿ ಕೇರಳ ವಿಧಾನಸಭೆಯಲ್ಲಿ ಮಂಗಳವಾರ ಒಮ್ಮತದ ನಿರ್ಣಯ ಅಂಗೀಕರಿಸಲಾಯಿತು. ಈ ಮೂಲಕ ಶಾಸಕಾಂಗ ಮಾರ್ಗ ಬಳಸಿ ಕಾಯ್ದೆಗೆ ವಿರೋಧ ವ್ಯಕ್ತಪ ಡಿಸಿದ ದೇಶದ ಮೊದಲ ರಾಜ್ಯ ಎನಿಸಿಕೊಂಡಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೇರಿದಂತೆ ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳು ಸಿಎಎ ಜಾರಿಗೆ ಈಗಾಗಲೇ ಭಾರಿ ವಿರೋಧವ್ಯಕ್ತಪಡಿಸಿದ್ದಾರೆ.