Job Description: ಬೆಂಗಳೂರು: ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಸಂವಿಧಾನ ದಿನ ಆಚರಣೆ ಮಾಡುವಂತೆ ಹಾಗೂ ಮಕ್ಕಳಿಗೆ ಸಂವಿಧಾನದ ಅರಿವು ಮೂಡಿಸುವಂತೆ ಸರ್ಕಾರವು ಆದೇಶ ಹೊರಡಿಸಿದೆ. ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ಕಡ್ಡಾಯವಾಗಿ ಆಚರಿಸಬೇಕೆಂದು ಜೊತೆಗೆ ಇದರ ಸಂಬಂಧಿತ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಹಮ್ಮಿಕೊಳ್ಳಬೇಕೆಂದು ಸರ್ಕಾರ ಆದೇಶ ನೀಡಿದೆ. ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಶಾಲೆಯ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಂದ ಹೇಳಿಸಬೇಕು ಎಂದು ಸಹ ಸರ್ಕಾರ ಸೂಚನೆ ನೀಡಿದೆ.