Job Description: ಬೆಂಗಳೂರು, ಜನವರಿ 2: ಕೇಂದ್ರ ಹಣಕಾಸು ಸಚಿವಾಲಯವು ದೇಶದ ಒಟ್ಟಾರೆ ಆಂತರಿಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹದ ಡಿಸೆಂಬರ್ ತಿಂಗಳ ಪಟ್ಟಿಯನ್ನು ಪ್ರಕಟಿಸಿದೆ. ಇದರಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನ ಕರ್ನಾಟಕದ್ದು. ಆದರೆ ರಾಜ್ಯ ಸರ್ಕಾರಕ್ಕೆ ಜಿಎಸ್ಟಿ ಪರಿಹಾರವಾಗಿ ಕೇಂದ್ರದಿಂದ ಬಿಡುಗಡೆಯಾಗಬೇಕಾದ ಹಣ ಇನ್ನೂ ಬಿಡುಗಡೆಯಾಗಿಲ್ಲ. ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಕರ್ನಾಟಕಕ್ಕೆ ಸಿಗಬೇಕಿದ್ದ ಜಿಎಸ್ಟಿ ಪರಿಹಾರದ ಸುಮಾರು 3,300 ಕೋಟಿ ರೂ. ಹಣವು ಡಿ.31ರಂದು ಬಿಡುಗಡೆಯಾಗಬೇಕಿತ್ತು. ಇದು ಪುನಃ ವಿಳಂಬವಾಗಿದೆ. ಇದರಿಂದ ರಾಜ್ಯದ ಹಣಕಾಸು ಮತ್ತು ಆಯವ್ಯಯದ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದೆ.