Job Description: ಈ ವರ್ಷದ ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಳ್ಳಲು 16 ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ ಮತ್ತು ಆರು ಸಚಿವಾಲಯಗಳ ಸ್ತಬ್ಧಚಿತ್ರಗಳನ್ನು ಅಂತಿಮಪಡಿಸಲಾಗಿದೆ. ಆದರೆ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ಇದರಲ್ಲಿ ಸೇರಿಲ್ಲ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿರುವ ಬೆನ್ನಲ್ಲೇ ಈ ಅಂಶ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳ ಪ್ರಸ್ತಾವನೆ ಸಲ್ಲಿಸಿದ್ದ ಟ್ಯಾಬ್ಲೋ ವನ್ನು ತಿರಸ್ಕರಿಸಲಾಗಿದೆ. 2019ರಲ್ಲಿ ಭಾಗವಹಿಸಿದ್ದ ಟ್ಯಾಬ್ಲೋ ರೀತಿಯಲ್ಲೇ ಈ ಬಾರಿಯ ಟ್ಯಾಬ್ಲೋ ಇರುವುದರಿಂದ ಗಣನೆಗೆ ತೆಗೆದುಕೊಂಡಿಲ್ಲ ಎಂದು ಸಮಿತಿ ತಿಳಿಸಿದೆ.