Job Description: ಹೊಸದಿಲ್ಲಿ: ಸಂಸತ್‌ನ ಬಜೆಟ್ ಅಧಿವೇಶನ ಜ.31ರಿಂದ ಆರಂಭವಾಗಲಿದ್ದು, ಫೆ.1ರಂದು ಆಯವ್ಯಯ ಮಂಡಿಸುವ ಸಾಧ್ಯತೆ ಇದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಚಿವ ಸಂಪುಟದ ಸಂಸದೀಯ ಸಮಿತಿಯು ಬಜೆಟ್ ಅಧಿವೇಶನದ ದಿನಾಂಕ ನಿಗದಿಪಡಿಸಿದ ಬಳಿಕ ಕೇಂದ್ರ ಸರಕಾರ ಅಧಿಕೃತವಾಗಿ ಪ್ರಕಟಿಸಲಿದೆ. ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಆರ್ಥಿಕ ಸಮೀಕ್ಷೆಯನ್ನು ಮಂಡಿಸುವ ಸಂಭವ ಇದೆ. ಅಧಿವೇಶನ ಏಪ್ರಿಲ್ ವರೆಗೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.