Job Description: ನವದೆಹಲಿ (ಪಿಟಿಐ): ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಭಾರತದಿಂದ ಇರಾನ್‌ಗೆ ಬಾಸ್ಮತಿ ಅಕ್ಕಿ ರಫ್ತು ಮಾಡುವುದಕ್ಕೆ ತಡೆ ಬೀಳುವ ಸಾಧ್ಯತೆ ಇದೆ. ಸದ್ಯದ ಪರಿಸ್ಥಿತಿಯಲ್ಲಿ ಇರಾನ್‌ಗೆ ಬಾಸ್ಮತಿ ಅಕ್ಕಿ ರಫ್ತು ಮಾಡಲು ಸಾಧ್ಯವಿಲ್ಲ. ಪರಿಸ್ಥಿತಿ ತಿಳಿಯಾಗುವವರೆಗೆ ರಫ್ತು ಬೇಡಿಕೆ ಸ್ವೀಕರಿಸಬೇಡಿ ಎಂದು ಅಖಿಲ ಭಾರತ ಅಕ್ಕಿ ರಫ್ತುದಾರರ ಸಂಘವು (ಎಐಆರ್‌ಇಎ) ತನ್ನ ಸದಸ್ಯರಿಗೆ ಮನವಿ ಮಾಡಿಕೊಂಡಿದೆ.