Job Description: ಬೆಂಗಳೂರು:ರಾಜ್ಯದಲ್ಲಿ ಪ್ರವಾಹದಿಂದ ತೀವ್ರ ನಷ್ಟವುಂಟಾಗಿದ್ದು ಐವತ್ತು ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋರಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ರಾಜ್ಯಕ್ಕೆ 1869.85 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ನೆರೆ ಪರಿಹಾರದ ಮೊದಲ ಕಂತಿನ ಪರಿಹಾರವಾಗಿ 1200 ಕೋಟಿ ರೂ. ಬಿಡುಗಡೆ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಎರಡನೇ ಕಂತು 1869.85 ಕೋಟಿ ರೂ. ಬಿಡುಗಡೆಗೊಳಿಸಲು ನಿರ್ಧರಿಸಿದೆ. ಅಸ್ಸಾಂಗೆ 616.63 ಕೋಟಿ ರೂ., ಹಿಮಾಚಲ ಪ್ರದೇಶಕ್ಕೆ 284.93 ಕೋಟಿ ರೂ., ಮಧ್ಯಪ್ರದೇಶಕ್ಕೆ 1749.73 ಕೋಟಿ ರೂ., ಮಹಾರಾಷ್ಟ್ರಕ್ಕೆ 956.93 ಕೋಟಿ ರೂ., ತ್ರಿಪುರಗೆ 63.32 ಕೋಟಿ ರೂ., ಉತ್ತರ ಪ್ರದೇಶಕ್ಕೆ 367.17 ಕೋಟಿ ರೂ. ಸೇರಿ ಏಳು ರಾಜ್ಯಗಳಿಗೆ 5,908 ಕೋಟಿ ರೂ. ಬಿಡಗಡೆ ಮಾಡಿದೆ. ಪರಿಹಾರ ಬಿಡುಗಡೆ ಮಾಡಲಾಗಿದೆ.