Job Description: ನವದೆಹಲಿ/ವಾಷಿಂಗ್ಟನ್, ಜ.7-ಆಶಾದಾಯಕ ಬೆಳವಣಿಗೆಯೊಂದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ದೂರವಾಣಿ ಮುಖೇನ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಮತ್ತಷ್ಟು ಸಹಕಾರ ವೃದ್ಧಿಯ ಕುರಿತು ಆಶಾಭಾವನೆ ವ್ಯಕ್ತವಾಗಿದೆ. ಪ್ರಧಾನಿ ಮೋದಿ ಅವರು ಅಮೆರಿಕ ರಾಷ್ಟ್ರಾಧ್ಯಕ್ಷರಿಗೆ ಹೊಸ ವರ್ಷದ ಶುಭಾಶಯ ಕೋರಿ ಉಭಯ ದೇಶಗಳ ನಡುವಣ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ಸಂಬಂಧ ಸಮಾಲೋಚನೆ ನಡೆಸಿದ್ದಾರೆ ಎಂದು ಪ್ರಧಾನಮಂತ್ರಿಯವರ ಕಾರ್ಯಾಲಯ (ಪಿಎಂಒ) ತಿಳಿಸಿದೆ.