Job Description: ಬೆಳಗಾವಿ: ಬೆಂಗಳೂರು ವಿಮಾನ ನಿಲ್ದಾಣದಂತೆ ರಾಜ್ಯದ ಹಲವು ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ವ್ಯಕ್ತಿಗಳ ಹೆಸರನ್ನಿಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಅಂಗೀಕಾರಕ್ಕಾಗಿ ಬೆಳಗಾವಿ, ದಕ್ಷಿಣ ಕನ್ನಡ.ಮೈಸೂರು, ಧಾರವಾಡ ಮತ್ತು ಕಲಬುರಗಿ ಜಿಲ್ಲಾಡಳಿತಕ್ಕೆ ಕಳುಹಿಸಲಾಗಿದ್ದು ವಿಮಾನ ನಿಲ್ದಾಣಗಳ ಮರು ನಾಮಕರಣ ಪ್ರಕ್ರಿಯೆ ಭರದಿಂದ ಸಾಗಿದೆ. ಆ ಪ್ರದೇಶದ ಐತಿಹಾಸಿಕ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ಸಹ ಸರ್ಕಾರ ಕೇಳಿದೆ. ಹುಬ್ಬಳ್ಳಿ, ಬೆಳಗಾವಿ ಮತ್ತು ಕಲಬುರಗಿ ವಿಮಾನ ನಿಲ್ದಾಣಗಳಿಗೆ ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ವಿಮಾನ ನಿಲ್ದಾಣಗಳು ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಬರುತ್ತದೆ.