Job Description: ಪುಣೆ, ಜ.10: ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಆತಿಥೇಯ ಭಾರತ 78 ರನ್ ಗಳ ಭರ್ಜರಿ ಜಯಗಳಿಸಿದ್ದು, ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡಿದೆ. ಮೊದಲ ಪಂದ್ಯ ಮಳೆಗೆ ಆಹುತಿಯಾಗಿತ್ತು. ಗೆಲುವಿಗೆ 202 ರನ್ ಗಳ ಕಠಿಣ ಸವಾಲು ಪಡೆದ ಶ್ರೀಲಂಕಾ 15.5 ಓವರ್ ಗಳಲ್ಲಿ 123 ರನ್ ಗಳಿಸಿ ಆಲೌಟ್ ಆಯಿತು. ಭಾರತದ ಪರ ನವದೀಪ್ ಸೈನಿ 3, ಶರ್ದುಲ್ ಠಾಕೂರ್ ಹಾಗೂ ವಾಶಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಪಡೆದರು. ಶ್ರೀಲಂಕಾ ಪರ ದನಂಜಯ ಡಿಸಿಲ್ವ ಅರ್ಧಶತಕ ಬಾರಿಸಿದರು. ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಕೆಎಲ್ ರಾಹುಲ್(54) ಹಾಗೂ ಶಿಖರ್ ಧವನ್(52) ಅರ್ಧಶತಕಗಳ ಕೊಡುಗೆ ನೆರವಿನಿಂದ ಶ್ರೀಲಂಕಾ ತಂಡಕ್ಕೆ 202 ರನ್ ಗಳ ಗೆಲುವಿಗೆ ಕಠಿಣ ಸವಾಲು ನೀಡಿತ್ತು.