Job Description: ನವದೆಹಲಿ, ಜನವರಿ 10: ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯ ರದ್ದು ಮತ್ತು ಅದರ ಸಂಬಂಧ ಕೇಂದ್ರ ಸರ್ಕಾರ ತೆಗೆದುಕೊಂಡ ಕಠಿಣ ಕ್ರಮಗಳ ಕುರಿತು ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ. ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಸೇರಿದಂತೆ 370ನೇ ವಿಧಿ ರದ್ದತಿ ವಿರುದ್ಧ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳನ್ನು ವಿಚಾರಣೆ ನಡೆಸಿದ್ದು ಸುಪ್ರೀಂಕೋರ್ಟ್ ಕಳೆದ ವರ್ಷ ನ.27ರಂದು ಆದೇಶ ಕಾಯ್ದಿರಿಸಿತ್ತು. ನ್ಯಾಯಮೂರ್ತಿ ವಿ. ರಮಣ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಆರ್. ಸುಭಾಷ್ ರೆಡ್ಡಿ ಮತ್ತು ಬಿಆರ್ ಗವಾಯಿ ಅವರನ್ನು ಒಳಗೊಂಡ ನ್ಯಾಯಪೀಠ ಈ ಕುರಿತು ಶುಕ್ರವಾರ ಆದೇಶ ಪ್ರಕಟಿಸಿತು.