Job Description: ನವದೆಹಲಿ: ಬಿಪಿನ್ ರಾವತ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ರಕ್ಷಣಾ ಪಡೆಗಳ ಮುಖ್ಯಸ್ಥರ ಇಲಾಖೆಗೆ ಕೇಂದ್ರ ಸರ್ಕಾರ ಅಧಿಕಾರಿಗಳನ್ನು ನೇಮಕ ಮಾಡಿದೆ. ಹೌದು.. ಇತ್ತೀಚೆಗೆ ವಾಯುಪಡೆ, ನೌಕಾಪಡೆ ಮತ್ತು ಸೇನಾಪಡೆಗಳು ಒಳಪಟ್ಟಿರುವ ಮೂರೂ ಪಡೆಗಳ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದ ಬಿಪಿನ್ ರಾವತ್ ಅವರ ಕಚೇರಿಗೆ ಕೇಂದ್ರ ಸರ್ಕಾರ ಅಧಿಕಾರಿಗಳನ್ನು ನೇಮಕ ಮಾಡಿದೆ. ಅದರಂತೆ ಈ ಕಚೇರಿಗೆ ಇಬ್ಬರು ಜಂಟಿ ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದು, ಇದಲ್ಲದೆ 13 ಉಪ ಕಾರ್ಯದರ್ಶಿಗಳು, 22 ಅಧೀನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ.