Job Description: ಬೆಂಗಳೂರು : ಹಿರಿಯ ಸಾಹಿತಿ, ಲೇಖಕ ಸಂಶೋಧಕ ಡಾ. ಎಂ ಚಿದಾನಂದಮೂರ್ತಿ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೂರ್ತಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಚಿದಾನಂದಮೂರ್ತಿ ಅವರು ಕನ್ನಡ ಭಾಷಾಶಾಸ್ತ್ರ, ವಚನ ಸಾಹಿತ್ಯ ಸಂಶೋಧನೆ ಮತ್ತು ಶಾಸನ ಶಾಸ್ತ್ರದಲ್ಲಿ ಅಮೋಘ ಕೊಡುಗೆ ನೀಡಿದ್ದು ವಿಜಯನಗರ ಸಾಮ್ರಾಜ್ಯ, ಹಂಪಿ ಪರಿಸರದ ಕುರಿತೂ ಸಂಶೋಧನೆಗಳನ್ನು ಮಾಡಿದ್ದಾರೆ. ಚಿದಾನಂದಮೂರ್ತಿ ಅವರಿಗೆ ಅನೇಕ ಗೌರವಗಳು, ಅವರ ಕೃತಿಗಳಿಗೆ ಸಾಹಿತ್ಯ ಆಕಾಡೆಮಿ ಪುರಸ್ಕಾರಗಳು,ಗೌರವಗಳು ದೊರೆತಿವೆ. ಕನ್ನಡ ಸಂಶೋಧನ ಕ್ಷೇತ್ರದಲ್ಲಿ ಕೆಲಸ ಮಾಡಿದ ವಿದ್ವಾಂಸರಿಗೆ ಪ್ರತಿವರ್ಷ ಚಿದಾನಂದಮೂರ್ತಿ ಅವರ ಜನ್ಮದಿನವಾದ ಮೇ ಹತ್ತರಂದು "ಚಿದಾನಂದ ಪ್ರಶಸ್ತಿ" ನೀಡಲಾಗುತ್ತಿದೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಲು ಪ್ರಮುಖ ಕಾರಣರಾಗಿದ್ದ ಚಿದಾನಂದ ಮೂರ್ತಿಯವರು ಇತಿಹಾಸಕಾರರಾಗಿ ಅಪಾರ ಸೇವೆ ಸಲ್ಲಿಸಿದ್ದರು.