Job Description: ನಿಗಧಿತ ಅವಧಿಗಿಂತ ಮೊದಲೇ ನೀಡಬೇಕಾದ ಬಾಕಿ ಹಣವನ್ನು ನೀಡಿದ ಕಾರಣಕ್ಕಾಗಿ ವಿಶ್ವಸಂಸ್ಥೆ ಭಾರತ ಸರ್ಕಾರಕ್ಕೆ ಧನ್ಯವಾದ ಹೇಳಿದೆ. ಹೌದು.. ವಿಶ್ವಸಂಸ್ಥೆಗೆ ಸದಸ್ಯ ರಾಷ್ಟ್ರಗಳು ನೀಡಬೇಕಾದ ಪೂರ್ಣ ಪ್ರಮಾಣದ ಮೊತ್ತವನ್ನು ಭಾರತ ಸರ್ಕರಾ ನಿಗದಿತ ಸಮಯಕ್ಕೂ ಮೊದಲೇ ಪಾವತಿಸಿದ್ದು, ಈ ಮೂಲಕ ಭಾರತ 193 ಸದಸ್ಯ ರಾಷ್ಟ್ರಗಳ ಪೈಕಿ ನಿಗದಿತ ಅವಧಿಗೂ ಮುನ್ನವೇ ಪೂರ್ಣ ಹಣ ಪಾವತಿಸಿದ ನಾಲ್ಕನೇ ರಾಷ್ಟ್ರವಾಗಿದೆ. ಇದೇ ಕಾರಣಕ್ಕೆ ವಿಶ್ವಸಂಸ್ಥೆ ಭಾರತಕ್ಕೆ ಧನ್ಯವಾದ ತಿಳಿಸಿದೆ