Job Description: ಲಾಹೋರ್(ಜ. 13): ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷಾರಫ್ ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಪಾಕ್ ನ್ಯಾಯಾಲಯವೊಂದು ರದ್ದುಗೊಳಿಸಿದೆ. ಮುಷರಫ್ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸಲು ರಚಿಸಲಾಗಿದ್ದ ವಿಶೇಷ ನ್ಯಾಯಮಂಡಳಿಯೇ ಅಸಂವಿಧಾನಿಕ ಎಂದು ಲಾಹೋರ್ ಹೈಕೋರ್ಟ್ ನ್ಯಾಯಪೀಠ ಅಭಿಪ್ರಾಯಪಟ್ಟು, ಶಿಕ್ಷೆಯನ್ನೇ ರದ್ದುಗೊಳಿಸಿದ ಆದೇಶ ಹೊರಡಿಸಿದೆ. ನ್ಯಾ| ಸಯದ್ ಮಜಹರ್ ಅಲಿ ಅಕ್ಬರ್ ನಖ್ವಿ, ನ್ಯಾ| ಮೊಹಮ್ಮದ್ ಅಮೀರ್ ಭಟ್ಟಿ ಮತ್ತು ನ್ಯಾ| ಚೌಧರಿ ಮಸೂದ್ ಜಹಾಂಗೀರ್ ಅವರಿದ್ದ ತ್ರಿಸದಸ್ಯ ನ್ಯಾಯಪೀಠವು ಈ ಮಹತ್ವದ ತೀರ್ಪು ನೀಡಿದೆ.