Job Description: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದು, ಫೆ.24ರಂದು ನವದೆಹಲಿಗೆ ಆಗಮಿಸುವ ನಿರೀಕ್ಷೆ ಇದೆ. ಆದರೆ ಅಮೆರಿಕ ಅಧ್ಯಕ್ಷರ ವಿರುದ್ಧದ ವಾಗ್ದಂಡನೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಅವರ ಭೇಟಿ ದಿನಾಂಕದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಅತ್ಯುನ್ನತ ಮೂಲಗಳು ತಿಳಿಸಿವೆ.