Job Description: ಇಂದು ದೇಶಾದ್ಯಂತ ಬುಧವಾರ 72ನೇ ಸೇನಾ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಮೂರು ಪಡೆಗಳ ಮುಖ್ಯಸ್ಥರಿಂದ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. 72ನೇ ಸೇನಾ ದಿನದ ಅಂಗವಾಗಿ ಭಾರತೀಯ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ, ವಾಯುಪಡೆ ಮುಖ್ಯಸ್ಥ ಚೀಫ್ ಮಾರ್ಷಲ್ ಆರ್ ಕೆಎಸ್ ಭದೌರಿಯಾ ಮತ್ತು ನೌಕೌಪಡೆ ಮುಖ್ಯಸ್ಥ ಚೀಫ್ ಅಡ್ಮಿರಲ್ ಕರಂಬಿರ್ ಸಿಂಗ್ ಇಂದು ಬೆಳಗ್ಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಅಗಲಿದ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಜನರಲ್.ಕೆ.ಎಂ.ಕಾರ್ಯಪ್ಪ ಅವರು ಕೊನೆಯ ಬ್ರಿಟಿಷ್ ಕಮಾಂಡರ್ ಇನ್ ಚೀಫ್ ಜ.ಸರ್ ಎಫ್ ಆರ್ ಆರ್ ಬುಚರ್ ಅವರಿಂದ 1949ರಲ್ಲಿ ಸೇನಾ ಕಮಾಂಡರ್ ಹುದ್ದೆಯನ್ನು ವಹಿಸಿಕೊಂಡು ಸ್ವತಂತ್ರ ನಂತರದ ಭಾರತೀಯ ಸೇನೆಯ ಮೊದಲ ಕಮಾಂಡರ್ ಇನ್ ಚೀಫ್ ಆಗಿ ಅಧಿಕಾರ ವಹಿಸಿಕೊಂಡ ದಿನದ ಸ್ಮರಣೆಗಾಗಿ ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ.