Job Description: ಬೆಂಗಳೂರು, ಜನವರಿ 17: ಸುಪ್ರಸಿದ್ದ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ 2020 ರ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ದೊರಕಿದೆ. ಶುಕ್ರವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು. ಜನವರಿ 17 ರಿಂದ ಜನವರಿ 26 ರವರೆಗೆ ಗಣರಾಜ್ಯೋತ್ಸವದ ಪ್ರಯುಕ್ತ ಈ ಪ್ರದರ್ಶನ ನಡೆಯಲಿದೆ. ಸ್ವಾಮಿ ವಿವೇಕಾನಂದರ 157ನೇ ಜನ್ಮದಿನಾಚರಣೆ ಸ್ಮರಣಾರ್ಥ "ವಿವೇಕ ಪುಷ್ಪ ಪ್ರದರ್ಶನ' ಪ್ರದರ್ಶನದ ಮುಖ್ಯ ಭಾಗವಾಗಿದೆ. ಉದ್ಯಾನದ ಗಾಜಿನ ಮನೆಯಲ್ಲಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ, ಬೋಧನೆಗಳು ಹೂವಿನ ಚಿತ್ತಾರದಲ್ಲಿ ಅರಳಿವೆ. ಮೈಸೂರು ಉದ್ಯಾನ ಕಲಾ ಸಂಘ ಹಾಗೂ ರಾಜ್ಯ ತೋಟಗಾರಿಕೆ ಇಲಾಖೆ ಜಂಟಿಯಾಗಿ 210 ಮಳಿಗೆಗಳಲ್ಲಿ ಫಲಪುಷ್ಪ ಪ್ರದರ್ಶನಗಳನ್ನು ಆಯೋಜಿಸಿವೆ.