Job Description: ದಾವೊಸ್: ಸ್ವಿಟ್ಜರ್ಲೆಂಡಿನ ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲನೇ ದಿನವಾದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯೊಬ್ಬರು ಅಮೆರಿಕಾ ಅಧ್ಯಕ್ಷರ ಭಾಷಣದಲ್ಲಿ ಪಾಲ್ಗೊಂಡಿರುವುದು ಇದೇ ಪ್ರಥಮವಾಗಿದೆ. ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರನ್ನು ಒಳಗೊಂಡಂತೆ ಪೂರ್ಣ ಪ್ರಮಾಣದ ನಿಯೋಗದೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಕ್ರಿಯವಾಗಿ ಭಾಗವಹಿಸಿದ್ದಾರೆ. 2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಆ ಸಂದರ್ಭದಲ್ಲಿ ಅಮೆರಿಕಾ ಸರ್ಕಾರದ ಕಾರ್ಯದರ್ಶಿ ಸಮಾವೇಶದಲ್ಲಿ ಭಾಗವಹಿಸಿದ್ದರು.