Job Description: ದಾವೊಸ್ : ವರ್ಲ್ಡ್ ಎಕನಾಮಿಕ ಫೋರಂ ಸಮಾವೇಶದ ಮೂರನೇ ದಿನ ಕರ್ನಾಟಕದ ಪಾಲಿಗೆ ಫಲಪ್ರದವಾಗಿ ಪರಿಣಮಿಸಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿಷ್ಠಿತ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು. ಇದರಲ್ಲಿ ದಸ್ಸಾ ಸಿಸ್ಟಮ್ಸ್, ಅರ್ಸೆಲಾರ್ ಮಿತ್ತಲ್, ಭಾರತ್ ಫೋರ್ಜ್, ಲಾಕ್ ಹೀಡ್ ಮಾರ್ಟಿನ್, ಲುಲು ಗ್ರೂಪ್ ಮತ್ತು ನೊವೊ ನಾರ್ಡಿಸ್ಕ್ ಮೊದಲಾದ ಕಂಪೆನಿಗಳು ಸೇರಿದ್ದವು.