Job Description: ಇಸ್ಲಾಮಾಬಾದ್: ಶಾಂಘೈ ಸಹಕಾರ ಸಂಘದ(ಎಸ್ ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲು ಭಾರತದ ಆಹ್ವಾನಕ್ಕೆ ಕಾಯುತ್ತಿರುವುದಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ತಿಳಿಸಿದ್ದಾರೆ. ಮೊನ್ನೆ 16ರಂದು ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ರವೀಶ್ ಕುಮಾರ್, ಭಾರತ ಸರ್ಕಾರವು ಬೇರೆ ರಾಷ್ಟ್ರಗಳ ನಾಯಕರೊಂದಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೂ ಎಸ್ ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಿದೆ ಎಂದಿದ್ದರು.