Job Description: ಧಾರವಾಡ: ವರಕವಿ ಡಾ. ದ ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನಿಂದ ಕೊಡಮಾಡುವ 2019-20ನೇ ಸಾಲಿನ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿಗೆ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಭಾಜನರಾಗಿದ್ದಾರೆ. ಈ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಯನ್ನು ಜ. 31ರಂದು ಸಂಜೆ ಐದು ಗಂಟೆಗೆ ಬೇಂದ್ರೆ ಭವನದಲ್ಲಿ ಪ್ರದಾನ ಮಾಡಲಾಗುವುದು. ಸಾಹಿತಿ ಡಾ. ಗುರುಲಿಂಗ ಕಾಪಸೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೊ.ತೇಜಸ್ವಿ ಕಟ್ಟಿಮನಿ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದರು. ಈ ಪ್ರಶಸ್ತಿ ಒಂದು ಲಕ್ಷ ರೂ. ಹಾಗೂ ಫಲಕ ಒಳಗೊಂಡಿದೆ.