Job Description: ಕೋಲ್ಕತ್ತಾ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ನಿರ್ಣಯ ಅಂಗೀಕರಿಸಿದೆ. ಈ ಮೂಲಕ ಕೇರಳ, ಪಂಜಾಬ್, ರಾಜಸ್ತಾನಗಳ ಬಳಿಕ ಸಿಎಎ ವಿರೋಧಿ ನಿರ್ಣಯ ಅಂಗೀಕರಿಸಿದ ನಾಲ್ಕನೇ ರಾಜ್ಯವಾಗಿ ಪಶ್ಚಿಮ ಬಂಗಾಳ ಹೊರಹೊಮ್ಮಿದೆ. ಪೌರತ್ವ ತಿದ್ದುಪಡಿ ಕಾಯಿದೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಇಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಈ ಅನುಮೋದನೆಗೆ ಕಾಂಗ್ರೆಸ್ ಮತ್ತು ಎಡಪಂಥೀಯ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದವು. ವಿಧಾನಸಭೆಯಲ್ಲಿ ಒಮ್ಮತದ ಮೂಲಕ ನಿರ್ಣಯ ಅಂಗೀಕಾರವಾದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ಅಲ್ಪ ಸಂಖ್ಯಅತರಿಗೆ ಮಾತ್ರವಲ್ಲ. ಪ್ರತಿಭಟನೆ ಮುಂದಾಳತ್ವವಹಿಸಿದ ಹಿಂದೂ ಸ್ನೇಹಿತರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.