Job Description: ಕಲಬುರಗಿ: ಕಲಬುರಗಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದಿದ್ದ 85 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಅದ್ದೂರಿ ತೆರೆ ಬಿದ್ದಿದ್ದು. ಸಾಹಿತ್ಯ ಸಮ್ಮೇಳನ ಕೊನೆಯ ದಿನ ಒಟ್ಟು ಆರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಮ್ಮೇಳನದಲ್ಲಿ ಕೊನೆಯ ದಿನ ತೆಗೆದುಕೊಳ್ಳಲಾಗಿರುವ ನಿರ್ಣಯಗಳು ಹೀಗಿದೆ- * ರಾಜ್ಯದಲ್ಲಿನ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಕಡ್ಡಾಯ. * ಕಲ್ಯಾಣ ಕರ್ನಾಟಕ ಐತಿಹಾಸಿಕ ತಾಣಗಳ ಅಭಿವೃದ್ಧಿ. * 371(ಜೆ) ಕಲಂ ತಿದ್ದುಪಡಿಯ ಲೋಪದೋಷಗಳನ್ನು ಸರಿಪಡಿಸಬೇಕು, ಸಮರ್ಪಕ ಅನುಷ್ಠಾನ ಕ್ರಮ ಕೈಗೊಳ್ಳಬೇಕು. * ಮಹಾಜನ್ ವರದಿಯಾ ಅಂತಿಮ, ಅದರ ಅನುಷ್ಠಾನಕ್ಕೆ ತಂದು ವಿವಾದ ಕೊನೆಗಾಣಿಸಲು ಆಗ್ರಹ * ಗಡಿಯಲ್ಲಿನ ಕನ್ನಡ ಶಾಲೆಗಳನ್ನು ಮುಚ್ಚದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಗ್ರಹ. * 86 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಹಾವೇರಿಯಲ್ಲಿ ನಡೆಸಲು ತೀರ್ಮಾನ