Job Description: ಮಕ್ಕಳು ಮತ್ತು ಮಹಿಳೆಯರ ಕಳ್ಳಸಾಗಣೆ ಕುರಿತು ವರದಿಯನ್ನು ಸಿದ್ಧಪಡಿಸಲು 2011 ರಲ್ಲಿ ಸುಪ್ರೀಂ ಕೋರ್ಟ್ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿಯು ತನ್ನ ವರದಿಯನ್ನು NCRB (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ)ಗೆ ಶಿಫಾರಸು ಮಾಡಿತ್ತು, NCRB ಸಿದ್ಧಪಡಿಸಿದ ವರದಿಯನ್ನು ಪ್ರಕಟಿಸಿದೆ. * ಈ ವರದಿ ಪ್ರಕಾರ ಮುಂಬೈ ಮತ್ತು ಕೋಲ್ಕತ್ತಾ ನಗರಗಲ್ಲಿ ಅತಿ ಹೆಚ್ಚು ಕಳ್ಳಸಾಗಾಣಿಕಾ ಪ್ರಕರಣಗಳು ದಾಖಲಾಗಿವೆ. * ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸಂಖ್ಯೆಯ ಮಹಿಳೆಯರು ಕಾಣೆಯಾದ ವರದಿಯಾಗಿದೆ. * ಮಧ್ಯಪ್ರದೇಶದಲ್ಲಿ ಅತಿ ಹೆಚ್ಚು ಸಂಖ್ಯೆಯ ಮಕ್ಕಳು ಕಾಣೆಯಾದ ಪ್ರಕರಣಗಳು ವರದಿಯಾಗಿವೆ.