Job Description: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್(Steel Authority of India) (SAIL) ನಲ್ಲಿನ ಶೇಕಡಾ 5ರಷ್ಟು ಷೇರುಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಯೋಜಿಸುತ್ತಿದ್ದು, ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಸೇರಿಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ. ಕೇಂದ್ರ ಸರ್ಕಾರವು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಶೇಕಡ 75ರಷ್ಟು ಷೇರುಗಳನ್ನು ಹೊಂದಿದ್ದು, 2014ರ ಡಿಸೆಂಬರ್ ನಲ್ಲಿ ಶೇಕಡಾ 5 ರಷ್ಟು ಷೇರುಗಳನ್ನು ಮಾರಾಟ ಮಾಡಲಾಗಿದೆ.