Job Description: ನವದೆಹಲಿ: ಪುಲ್ವಾಮಾದಲ್ಲಿ ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಸುಮಾರು 40ಕ್ಕೂ ಅಧಿಕ ಭಾರತೀಯ ಸಿಆರ್‌ಪಿಎಫ್(CRPF) ಯೋಧರು ಹುತಾತ್ಮರಾಗಿದ್ದರು. ಈ ಎಲ್ಲ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗೌರವ ನಮನ ಸಲ್ಲಿಸಿ ಪುಲ್ವಾಮಾ ಹುತಾತ್ಮರನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ. ದಿನಾಂಕ ಫೆಬ್ರವರಿ 14, 2019 ರಂದು, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಬಾಂಬ್ ದಾಳಿಯಲ್ಲಿ ಸುಮಾರು 40ಕ್ಕೂ ಹೆಚ್ಚು ಭಾರತೀಯ ಯೋಧರು ಅಮರರಾಗಿದ್ದರು. ಇದೆ ವೇಳೆ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥ ಸ್ಮಾರಕ ಸ್ತಂಭ ಸಮರ್ಪಣೆ ಮೂಲಕ ಕೇಂದ್ರ ಮೀಸಲು ಪೊಲೀಸ್ ಪಡೆ ಗೌರವ ಸಲ್ಲಿಸಲಿದೆ.