Job Description: 2019 ನೇ ಸಾಲಿನ ಬ್ರಿಟನ್ ಮತ್ತು ಫ್ರಾನ್ಸ್ ದೇಶಗಳ ಆರ್ಥಿಕತೆಗಳನ್ನು ಹಿಂದಿಕ್ಕಿದ ಭಾರತವು ಪ್ರಸ್ತುತ ಜಗತ್ತಿನ 5ನೇ ಅತಿದೊಡ್ಡ ಅರ್ಥವ್ಯವಸ್ಥೆಯಾಗಿ ಹೊರಹೊಮ್ಮಿದೆ. ಬ್ರಿಟನ್ ಅರ್ಥ ವ್ಯವಸ್ಥೆ 2.83 ಲಕ್ಷ ಕೋಟಿ ಡಾಲರ್ ಮತ್ತು ಫ್ರಾನ್ಸ್ ನದ್ದು 2.71 ಲಕ್ಷ ಕೋಟಿ ಡಾಲರ್, ಈ ಎರಡು ದೇಶಗಳನ್ನು ಹಿಂದಿಕ್ಕಿರುವ ಭಾರತದ ಅರ್ಥ ವ್ಯವಸ್ಥೆ ಸುಮಾರು 2.94 ಲಕ್ಷ ಕೋಟಿ ಡಾಲರ್ ಆಗಿದೆ ಎಂದು ಅಮೆರಿಕಾದ ಥಿಂಕ್ ಟ್ಯಾಂಕ್ ವರ್ಲ್ಡ್ ಪಾಪ್ಯುಲೇಷನ್ ರಿವ್ಯೂ ತನ್ನ ವರದಿಯಲ್ಲಿ ತಿಳಿಸಿದೆ. ಭಾರತವು ಹಳೆಯ ನೀತಿಗಳನ್ನು ಬದಲಿಸಿ ಮುಕ್ತ ಮಾರುಕಟ್ಟೆಗೆ ಅವಕಾಶ ಮಾಡಿಕೊಟ್ಟಿದೆ ಈ ಬದಲಾವಣೆಗೆ ಪ್ರಮುಖ ಕಾರಣವೆಂದು ವರದಿಯಲ್ಲಿ ತಿಳಿಸಲಾಗಿದೆ.