Job Description: ಭಾರತ ಬೇಟಿಯಲ್ಲಿರುವ ಅಮೇರಿಕಾ ಅಧ್ಯಕ್ಷ ಟ್ರಂಪ್ ಅವರು ಭಾರತದೊಂದಿಗೆ 3 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಸೋಮವಾರ ಅಹ್ಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 'ನಮಸ್ತೆ ಟ್ರಂಪ್' ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾರತವು ಅಮೆರಿಕದ ಪ್ರಮುಖ ಮಿತ್ರ ರಾಷ್ಟ್ರವಾಗಿದ್ದು, ಉಭಯ ರಾಷ್ಟ್ರಗಳ ಮಧ್ಯೆ ರಕ್ಷಣಾ ಸಹಕಾರ ಹೀಗೆಯೇ ಮುಂದುವರಿಯಲಿದೆ ಮತ್ತು ಅಮೆರಿಕವು ವಿಶ್ವದಲ್ಲೇ ಅತ್ಯಂತ ನೂತನ ಮತ್ತು ಆಧುನಿಕ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದು, ಭಾರತಕ್ಕೆ ನೂತನ ತಂತ್ರಜ್ಞಾನದ 4 ಹೆಲಿಕಾಪ್ಟರ್‌ಗಳು ಸೇರಿ ವಿವಿಧ ಆಧುನಿಕ ಶಸ್ತ್ರಾಸ್ತ್ರ ಪೂರೈಸುವ ಒಪ್ಪಂದಕ್ಕೆ ಸಹಿ ಹಾಕಲಾಗುವದು ಎಂದು ಘೋಷಿಸಿದರು.