Job Description: ಬೆಂಗಳೂರು : ಮಹದಾಯಿ ಯೋಜನೆ ವಿಚಾರದಲ್ಲಿ ಕರ್ನಾಟಕ ಮತ್ತು ಗೋವಾ ರಾಜ್ಯಗಳ ಮಧ್ಯ ಇದ್ದ ವಿವಿದಕ್ಕೆ ತೆರೆಬಿದ್ದಿದ್ದು ಸುಪ್ರೀಂ ಕೋರ್ಟ್ ಆದೇಶದಂತೆ ಮಹದಾಯಿ ಯೋಜನೆ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಮೂಲಕ ಬಹು ದಿನಗಳ ಕರ್ನಾಟಕದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. * ಕೇಂದ್ರ ಸರ್ಕಾರ ಕರ್ನಾಟಕ ಮಹಾದಾಯಿ ಯೋಜನೆ ಅನ್ವಯ 13.42 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. * ದಿನಾಂಕ ಫೆಬ್ರವರಿ 20ರಂದು ಸುಪ್ರೀಂಕೋರ್ಟ್ ಮಹಾದಾಯಿ ಯೋಜನೆ ಬಗ್ಗೆ ಕೇಂದ್ರಕ್ಕೆ ಅಧಿಸೂಚನೆ ಹೊರಡಿಸಲು ಆದೇಶಿಸಿತ್ತು. * ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಮಹದಾಯಿ ವಿವಾದವಿದೆ.