Job Description: ಮಂಡ್ಯದ ಮೈಶುಗರ ಸರ್ಕಾರೀ ಸಕ್ಕರೆ ಕಾರ್ಖಾನೆ ಮತ್ತು ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗಳು ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದು ಈ ಕಾರ್ಖಾನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಷ್ಟಕ್ಕೆ ಸಿಲುಕಿರುವ ಕಾರ್ಖಾನೆಗಳ ಪುನಶ್ಚೇತನಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಕ್ಕರೆ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.