Job Description: ಬೆಂಗಳೂರು : ಕೇಂದ್ರ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸಿರುವ ಖಾಸಗಿ ರೈಲು ತೇಜಸ್ ಎಕ್ಸ್‌ಪ್ರೆಸ್ ರೈಲಿಗೆ ಕರ್ನಾಟಕದಲ್ಲಿ ಸಂಚಾರಕ್ಕೆ ಒಪ್ಪಿಗೆ ಸಿಕ್ಕಿದ್ದು, ಈ ರೈಲು ಸಂಚರಿಸಬೇಕಾದ ಮಾರ್ಗವನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಒಂದು ತೇಜಸ್ ರೈಲನ್ನು ಘೋಷಣೆ ಮಾಡಲಾಗಿತ್ತು. * ದೇಶದ ಮೊದಲ ತೇಜಸ್ ರೈಲು ದೆಹಲಿ-ಲಕ್ನೋ ಮಾರ್ಗದಲ್ಲಿ ಸಂಚಾರ ನಡೆಸುತ್ತಿದೆ. * ತೇಜಸ್ ಎಕ್ಸ್‌ಪ್ರೆಸ್ ಹವಾನಿಯಂತ್ರಿತ ಸೆಮಿ ಹೈಸ್ಪೀಡ್ ರೈಲು ಆಗಿದೆ. ಗಂಟೆಗೆ 130 ಕಿ. ಮೀ. ವೇಗದಲ್ಲಿ ಸಂಚರಿಸುತ್ತವೆ. (200 ಕಿ. ಮೀ. ಸಂಚರಿಸುವ ಸಾಮರ್ಥ್ಯ ಹೊಂದಿದೆ). * ಕರ್ನಾಟಕದ ಮೊದಲ ತೇಜಸ್ ಎಕ್ಸ್‌ಪ್ರೆಸ್ ರೈಲು ಮಂಗಳೂರು ಮತ್ತು ಕೊಯಮತ್ತೂರು ನಡುವೆ (ಸುಮಾರು 414 ಕಿ.ಮೀ.) ಸಂಚಾರ ನಡೆಸಲಿದೆ.