Job Description: ನವದೆಹಲಿ : ವಿಶ್ವವ್ಯಾಪ್ತಿ ಮಾರಕವಾಗಿ ಕಾಡುತ್ತಿರುವ ಕೊರೊನಾ ವೈರಸ್ ಸೋಂಕಿನಿಂದ ಆತಂಕ ಮನೆ ಮಾಡಿದೆ. ಇದೆ ಕಾರಣದಿಂದಾಗಿ ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆ ಮುಂದೂಡಲಾಗಿದೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್ ಪ್ರವಾಸ ಕೂಡ ರದ್ದಾಗಿದೆ. ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆಗೆ ಪ್ರಧಾನಿ ಮೋದಿ ಹಾಜರಾಗಲು ಪ್ರವಾಸ ಕೈಗೊಳ್ಳಬೇಕಾಗಿತ್ತು.