Job Description: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಕರ್ನಾಟಕ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಈ ಭಾರಿ ಕೊಡಗಿನ ಹಿರಿಯ ರಂಗಭೂಮಿ ನಟಿ ಅಡ್ಡಂಡ ಅನಿತಾ ಕಾರ್ಯಪ್ಪ ಅವರಿಗೆ ಲಭಿಸಿದೆ ಇದೆ ದಿನಾಂಕ ಮಾರ್ಚ್ 8ರಂದು ನಡೆಯುವ ಮಹಿಳಾ ದಿನಾಚರಣೆ ದಿನದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆಯಾದ ಶಶಿಕಲಾ ಜೊಲ್ಲೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಪ್ರಶಸ್ತಿ ₹25 ಸಾವಿರ ನಗದು ಮತ್ತು ಪ್ರಶಸ್ತಿ ಪಲಕ ಒಳಗೊಂಡಿದೆ.