Job Description: ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಕೇಂದ್ರ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು “ವಿಜಯೀಭವ’ ಯೂಟ್ಯೂಬ್ ಚಾನಲ್ ಹಾಗು ಮೈತ್ರಿಗೆ ಚಾಲನೆ ನೀಡಿದರು. * “ಮೈತ್ರಿ’ ಸಹಾಯವಾಣಿ: ವಿದ್ಯಾರ್ಥಿಗಳ ಶೈಕ್ಷಣಿಕ ಸಲಹೆಗಳಿಗಾಗಿ ಮೈತ್ರಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಆ ಮೂಲಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಮತ್ತು ವೈಯಕ್ತಿಕ ಸಮಸ್ಯೆಗಳ ಕುರಿತು ಮಾರ್ಗದರ್ಶನ ಪಡೆಯಬಹುದಾಗಿದೆ. * “ವಿಜಯೀಭವ" ಯೂಟ್ಯೂಬ್ ಚಾನೆಲ್ : ವಿದ್ಯಾರ್ಥಿಗಳ ವೃತ್ತಿ ಮಾರ್ಗದರ್ಶನ, ಸ್ಫೂರ್ತಿ, ಶೈಕ್ಷಣಿಕ ಮಾಹಿತಿ ಮೂಲಕ ಯುವಜನರಿಗೆ ಸೂಕ್ತ ಮಾರ್ಗದರ್ಶನ ನೀಡಲು ಉತ್ತಮ ವೇದಿಕೆಯಾಗುವಂತೆ ಈ ಯುಟ್ಯೂಬ್ ಚಾನೆಲ್ ಆರಂಭಿಸಲಾಗಿದೆ.