Job Description: ಮಂಗಳೂರು : ರಾಜ್ಯದ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿ ದೇಶದ ವಿವಿಧ ನಾಲ್ಕು ವಿಮಾನ ನಿಲ್ದಾಣಗಳಿಗೆ 'ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣ ಪ್ರಶಸ್ತಿ' ಲಭಿಸಿದೆ. ಈ ಕುರಿತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಒಟ್ಟು 4 ವಿಮಾನ ನಿಲ್ದಾಣಗಳು 10 ವಿಭಾಗಗಳಲ್ಲಿ ಪ್ರಯಾಣಿಕರಿಗೆ ನೀಡಿದ ಸೇವೆಗಳನ್ನು ಆದರಿಸಿ, ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಚಂಡೀಗಡ, ತಿರುವಂತನಪುರಂ ಹಾಗೂ ಲಕ್ನೋ ವಿಮಾನ ನಿಲ್ದಾಣಗಳು ಈ ಪ್ರಶಸ್ತಿ ದೊರೆತಿದೆ.