Job Description: ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಪಾಟೀಲ ಪುಟ್ಟಪ್ಪ ಅವರು ದಿನಾಂಕ 16 ಮಾರ್ಚ್ 2020 ರಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 102 ವರ್ಷ ವಯಸ್ಸಾಗಿತ್ತು. * 70ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರು ಕನ್ನಡ ನಾಡು ನುಡಿಗೆ ಅಪಾರ ಕೊಡುಗೆ ನೀಡಿದ್ದಾರೆ. * 1921 ಜನವರಿ 14ರಂದು ಧಾರವಾಡ ಜಿಲ್ಲೆಯ ಹಾವೇರಿ ತಾಲೂಕು ಕುರಬಗೊಂಡದಲ್ಲಿ ಜನನ * ಪಾಟೀಲ ಪುಟ್ಟಪ್ಪ, 'ಪಾಪು' ಎಂದೇ ಖ್ಯಾತರಾಗಿದ್ದರು. * ಶತಾಯುಷಿ ಪಾಟೀಲ ಪುಟ್ಟಪ್ಪ ಸ್ವಾತಂತ್ರ್ಯ ಹೋರಾಟಗಾರರಾಗಿ ಪತಿಕ್ರೋದ್ಯಮ, ಸಾಹಿತ್ಯ ರಚನೆ ಮತ್ತು ಕನ್ನಡಪರ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. * ಎರಡು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. * ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ, ಟಿಎಸ್ ಆರ್ ಪತ್ರಿಕಾ ಪ್ರಶಸ್ತಿ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಪಾಟೀಲ ಪುಟ್ಟಪ್ಪ ಅವರು ಭಾಜನರಾಗಿದ್ದರು.